ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ ಆಡಿಸಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ತಡಸ ಪೋಲಿಸ್ ಠಾಣೆಯ ಪಿಎಸ್ಐ ಮತ್ತು ಪೊಲೀಸ್ ಕಾನ್ ಸ್ಟೆಬಲ್ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿಎಸ್ಐ ಶರಣಬಸಪ್ಪ ಕಾಂದೆ ಮತ್ತು ಕಾನ್ ಸ್ಟೆಬಲ್ ಸುರೇಶ್ ಮಾನೋಜಿ ಬಂಧಿತರಾಗಿದ್ದಾರೆ. ಇಸ್ಪೀಟ್ ಜೋಜಾಟ ಆಡಿಸಲು ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ಎರಡು ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ. ಚಂದ್ರಶೇಖರ್ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.