
ರಾಮನಗರ: ರಾಗಿ ಖರೀದಿ ಕೇಂದ್ರದ ಮೇಲೆ ಲೋಕಾಯುಕ್ತ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆ ಕನಕಪುರದ ರಾಗಿ ಕೇಂದ್ರದ ಮೇಲೆ ಲೋಕಾಯುಕ್ತ ಎಸ್.ಪಿ. ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಖರೀದಿ ಕೇಂದ್ರದ ಅಧಿಕಾರಿಗಳು ಮತ್ತು ರೈತರಿಂದ ಮಾಹಿತಿ ಪಡೆದುಕೊಂಡಿದ್ದಾರೆ.