ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, 63 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಜಯನಗರ ಬೆಸ್ಕಾಂ ಉಪವಿಭಾಗದ ಇಇ ಚನ್ನಕೇಶವ ನಿವಾಸದ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಚನ್ನಕೇಶವ ಆಘಾತಕ್ಕೀಡಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಚನ್ನಕೇಶವ ಅವರ ಬಿಪಿಯಲ್ಲಿ ಏರುಪೇರಾಗಿದ್ದು, ತಕ್ಷಣ ಚನ್ನಕೇಶವ ಅವರ ಪತ್ನಿ ಹಾಗೂ ಅಧಿಕಾರಿಗಳು ಬಿಪಿ ಮಾತ್ರೆ ನೀಡಿದ್ದಾರೆ. ಕೆಲ ಹೊತ್ತಿನ ಬಳಿಕ ಚನ್ನಕೇಶವ ಅವರು ಸಾವರಿಸಿಕೊಂಡ ಘಟನೆ ನಡೆದಿದೆ.
ಚನ್ನಕೇಶವ ಅವರ ಅಮೃತಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಪರುಶೀಲನೆ ವೇಳೆ 6 ಲಕ್ಷ ನಗದು, 3 ಕೆಜಿ ಚಿನ್ನ, 28 ಕೆಜಿ ಬೆಳ್ಳಿ, 25 ಲಕ್ಷ ಮೌಲ್ಯದ ವಜ್ರ ಸೇರಿದಂತೆ 1.5 ಕೋಟಿ ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.