ದೇವನಹಳ್ಳಿ: ವಿದ್ಯುತ್ ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.
ಪದ್ಮನಾಭ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ. ಕುಂದಾಣ ಗ್ರಾಮ ಪಂಚಾಯಿತಿ ಪಿಡಿಒ ಆಗಿರುವ ಪದ್ಮನಾಭ, ಲೇಔಟ್ ಗೆ ಕೇಬಲ್ ಹಾಕುವ ವಿಚಾರವಾಗಿ ಎನ್ ಒಸಿ ಗೆ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿದ್ಯುತ್ ಗುತ್ತಿಗೆದಾರ ಮಲ್ಲಿಕಾರ್ಜುನ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.
ಅದಾಗಲೇ 3 ಲಕ್ಷ ರೂಪಾಯಿ ಹಣ ಪಡೆದಿದ್ದ ಪದ್ಮನಾಭ, ಬಾಕಿ 2 ಲಕ್ಷ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಒ ಪದ್ಮನಾಭ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ವಶಕ್ಕೆ ಪಡೆಯಲಾಗಿದೆ.