alex Certify ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ಸಣ್ಣ ನೀರಾವರಿ ಅಧಿಕಾರಿಯ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ.

ದಾವಣಗೆರೆಯ ಜಯನಗರದ ಮಹೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೀದರ್ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಕಾನ್ಸ್ ಟೇಬಲ್ ವಿಜಯ್ ಕುಮಾರ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

ಮಡಿಕೇರಿಯಲ್ಲೂ ಲೋಕಾಯುಕ್ತ ದಾಳಿಯಾಗಿದ್ದು, ಕೊಡಗು ಅಪರ ಜಿಲ್ಲಾಧಿಕಾರಿ ನಂಜುಡೇಗೌಡ ಹಾಗೂ ಬಿಬಿಎಂಪಿ ಎಇ ಭಾರತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...