alex Certify ಶಿವಮೊಗ್ಗ : ಸ್ಮಶಾನದಲ್ಲೇ 15 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ : ಸ್ಮಶಾನದಲ್ಲೇ 15 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸ್ಮಶಾನದಲ್ಲಿ 15 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಿನಾಥ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸ್ಮಶಾನದಲ್ಲಿ 15 ಸಾವಿ ರೂಪಾಯಿ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.
ಗೋಪಿನಾಥ್ ಬುಕ್ಲಾಪುರ ಸಶ್ಮಾನ ಕಾಮಗಾರಿ ಹಣ ಬಿಡುಗಡೆ ಮತ್ತು ಸ್ಥಳ ಪರಿಶೀಲನೆ ಮಾಡಿ ರಿಪೋರ್ಟ್ ಕೊಡಲು 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. . ಈ ಸಂಬಂಧ ಶಿವಮೊಗ್ಗ ಲೋಕಾಯುಕ್ತರಿಗೆ ದೂರು ದಾಖಲಾಗಿತ್ತು. ದೂರಿನನ್ವಯ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ಖೆಡ್ಡಾಗಿ ಬೀಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...