
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ಪುರಸಭೆಯ ಕೇಸ್ ವರ್ಕರ್ ಚಂದ್ರಕಲಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಜುನಾಥ್ ಎಂಬುವವರಿಂದ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ನಿವೇಶನವನ್ನು ಪುರಸಭೆಗೆ ಸೇರಿಸಿ ಖಾತೆ ಮಾಡಿಕೊಡಲು ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಜುನಾಥ್ ಅವರಿಂದ ಕೇಸ್ ವರ್ಕರ್ ಚಂದ್ರಕಲಾ 15,000 ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಂದ್ರಕಲಾರನ್ನು ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ.