ಏ.9 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ

ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಸುರೇಶ್.ಎಂ.ಭಾವಿಮನಿ ಮತ್ತು ನಾಗರೆಡ್ಡಿ ಇವರ ನೇತೃತ್ವದಲ್ಲಿ ಕುರುಗೋಡು, ಸಂಡೂರು, ಸಿರುಗುಪ್ಪ ಮತ್ತು ಕಂಪ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ.

*ಅಹವಾಲು ಸ್ವೀಕರಿಸುವ ದಿನ ಮತ್ತು ಸ್ಥಳ

ಏ.09 ರಂದು ಬೆಳಿಗ್ಗೆ 11.30  ಗಂಟೆಯಿಂದ  ಮಧ್ಯಾಹ್ನ 2 ಗಂಟೆಯವರೆಗೆ ಕುರುಗೋಡು ತಹಶೀಲ್ದಾರರ ಕಚೇರಿ ಸಭಾಂಗಣ. ಏ.17 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣ. ಏ.23 ರಂದು ಬೆಳಿಗ್ಗೆ 11.30  ಗಂಟೆಯಿಂದ  ಮಧ್ಯಾಹ್ನ 02 ಗಂಟೆಯವರೆಗೆ ಸಿರುಗುಪ್ಪ ಸಿಡಿಪಿಓ ಕಚೇರಿ ಸಭಾಂಗಣ ಮತ್ತು ಏ.24 ರಂದು ಬೆಳಿಗ್ಗೆ 11.30  ಗಂಟೆಯಿಂದ  ಮಧ್ಯಾಹ್ನ 02 ಗಂಟೆಯವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ.01 ಮತ್ತು 02 ಗಳನ್ನು ಸಹ ನೀಡಲಾಗುವುದು. ಕುಂದು ಕೊರತೆಗಳಿರುವ ಸಾರ್ವಜನಿಕರು ದೂರುಗಳಿದ್ದಲ್ಲಿ ನಿಗದಿಪಡಿಸಿದ ದಿನದಂದು ಅರ್ಜಿ ನಮೂನೆಯಲ್ಲಿ ಅಹವಾಲು ನೀಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read