ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ ಬಲೆಗೆ ಬಿದ್ದವರು. ಇ- ಖಾತೆ ಮಾಡಿಕೊಡಲು 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 2000 ರೂ. ಸ್ವೀಕರಿಸುವಾಗ ಗೋವಿಂದಪ್ಪ ಸಿಕ್ಕಿ ಬಿದ್ದಿದ್ದಾರೆ.
ಗ್ರಾಮದ ಮುನಿಯಪ್ಪ ಎಂಬುವರ ಬಳಿ ಲಂಚ ಪಡೆಯುತ್ತಿದ್ದ ಗೋವಿಂದಪ್ಪನನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.