alex Certify ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ದಾಳಿ: ಗ್ರಾಪಂ ಕಾರ್ಯದರ್ಶಿ ಬಲೆಗೆ

ಕೋಲಾರ: 2000 ರೂ. ಲಂಚ ಸ್ವೀಕರಿಸುವಾಗ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೋವಿಂದಪ್ಪ ಬಲೆಗೆ ಬಿದ್ದವರು. ಇ- ಖಾತೆ ಮಾಡಿಕೊಡಲು 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 2000 ರೂ. ಸ್ವೀಕರಿಸುವಾಗ ಗೋವಿಂದಪ್ಪ ಸಿಕ್ಕಿ ಬಿದ್ದಿದ್ದಾರೆ.

ಗ್ರಾಮದ ಮುನಿಯಪ್ಪ ಎಂಬುವರ ಬಳಿ ಲಂಚ ಪಡೆಯುತ್ತಿದ್ದ ಗೋವಿಂದಪ್ಪನನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...