ಮನೆ ಪರಿಹಾರ ಧನ ನೀಡಲು ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯಿತಿ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆಯು 2021ರ ಮಹಾ ಮಳೆಯಿಂದ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಕುರಿತು ಜಿಪಿಎಸ್‍ನಲ್ಲಿ ಮಾಹಿತಿ ಸಂಗ್ರಹಿಸಿ ವರದಿ ಮಾಡಲು  ಬಗನಕಟ್ಟೆ ಗ್ರಾಮ ಪಂಚಾಯತಿ ಪಿಡಿಓ ಮಂಜುನಾಥನವರು ಸಾಕಮ್ಮರವರಿಂದ 20 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಅದರಲ್ಲಿ 13,000 ರೂ. ಪಡೆದು ಬಾಕಿ ಹಣವನ್ನು ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಸಾಕಮ್ಮರವರಿಗೆ ಮನೆಯ ಪುನರ್ ನಿರ್ಮಾಣ ಕಾರ್ಯಕ್ಕೆ ರಾಜೀವ್ ಗಾಂಧಿ ವಸತಿ ಯೋಜನೆಯಡಿಯಲ್ಲಿ ರೂ. 5 ಲಕ್ಷ ರೂ. ಪರಿಹಾರ ಧನ ಮಂಜೂರಾಗಿದ್ದು, ಮನೆಯ ಪುನರ್ ನಿರ್ಮಾಣ ಕಾರ್ಯ ಮುಕ್ತಾಯಗೊಂಡಿದೆ.  ನೆರೆ ಸಂತ್ರಸ್ಥರ ಪುನರ್ ವಸತಿ ಯೋಜನೆಯಂತೆ ಕಂತಿನ ಹಣ 1 ಲಕ್ಷ ರೂ. ಬಿಡುಗಡೆ ಮಾಡಲು ಪಿಡಿಒ ಮಂಜುನಾಥ ಮತ್ತೊಮ್ಮೆ 6000 ರೂ. ಲಂಚಕ್ಕೆ ಬೇಡಿಕೆಯಿಟ್ಟಿರುತ್ತಾರೆ. ಸಾಕಮ್ಮನವರು ಶಿವಮೊಗ್ಗ ಲೋಕಾಯುಕ್ತ ಕಚೇರಿಗೆ ದೂರ ಕೊಟ್ಟ ಮೇರೆಗೆ ನ. 15 ರಂದು ಪ್ರಕರಣ ದಾಖಲಾಗಿರುತ್ತದೆ.

ನ. 16 ರಂದು ಬಗನಕಟ್ಟೆ ಗ್ರಾ.ಪಂ. ಪಿಡಿಒ ಮಂಜುನಾಥ ಅವರು ಸಾಕಮ್ಮರವರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿ, ಲಂಚದ ಹಣ 6000 ರೂ. ವಶಪಡಿಸಿಕೊಂಡು, ಪೊಲೀಸ್ ನಿರೀಕ್ಷಕ ಪ್ರಕಾಶ್‍ ಮುಂದಿನ ತನಿಖೆಯನ್ನು ಕೈಗೊಂಡಿರುತ್ತಾರೆ.

ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಾಧೀಕ್ಷಕ ಉಮೇಶ ಈಶ್ವರ ನಾಯ್ಕ, ಪೊಲೀಸ್ ನಿರೀಕ್ಷಕ ಹೆಸ್.ಎಸ್. ಸುರೇಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಎಸ್.ಕೆ. ಪ್ರಸನ್ನ, ಮಹಂತೇಶ, ಬಿ.ಟಿ ಚನ್ನೇಶ, ಪ್ರಶಾಂತ್ ಕುಮಾರ್, ರಘುನಾಯ್ಕ, ಸುರೇಂದ್ರ, ಅರುಣ್ ಕುಮಾರ್, ದೇವರಾಜ್, ಪುಟ್ಟಮ್ಮ, ಪ್ರದೀಪ್‍ಕುಮಾರ್, ತರುಣ್ ಕುಮಾರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read