ಬೆಂಗಳೂರು: ಆವಲಹಳ್ಳಿ ಬೆಸ್ಕಾಂ ಎಇಇ ರಮೇಶ್ ಬಾಬು, ಜೆಇ ನಾಗೇಶ್ ಅವರು 16.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯ ಬೆಸ್ಕಾಂ ಕಚೇರಿಯಲ್ಲಿ ಘಟನೆ ನಡೆದಿದೆ. ಖಾಸಗಿ ಲೇಔಟ್ ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಿಜಯಕುಮಾರ್ ಎಂಬುವರ ಬಳಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೊಮ್ಮನಹಳ್ಳಿಯ ಮಾರ್ಟ್ ಸಮೀಪ ಜೆಇ ನಾಗೇಶ್ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಎಸ್ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ನಡೆದಿದೆ.