alex Certify BIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚದ ಹಣ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI


ಬೆಂಗಳೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಬೆಂಗಳೂರಿನ ಮಹದೇವಪುರ ಆರ್ ಐ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಆರ್.ಐ ವಸಂತ್ ಲೋಕಾಯುಕ್ತ ಬಲೆಗೆ ಬಿದ್ದವರು. ಕೃಷಿ ಭೂಮಿಗೆ ಖಾತೆ ಪೋಡಿ ಮಾಡಿಕೊಡಲು 28 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವಸಂತ್, 4 ಲಕ್ಷ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಸಂತ್ ಅವರನ್ನು ಬಂಧಿಸಿ ಹಣವನ್ನು ವಶಕ್ಕೆ ಪಡೆದಿದ್ದಾರೆ.

ವಸಂತ್ ಅವರ ಮನೆ ಮೇಲೂ ಲೋಕಾಯುಕ್ತ ಅಧಿಕಾರಿ ಗಳು ದಾಳಿ ನಡೆಸಿ 9 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಖಾತೆ ಪೋಡಿ ಮಾಡಿಕೊಡಲು 28 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ವಸಂತ್ ಅದಾಗಲೇ 3.5 ಲಕ್ಷ ಹಣ ಹಾಗೂ 4 ಲಕ್ಷ ರೂಪಾಯಿ ಚೆಕ್ ಪಡೆದುಕೊಂಡಿದ್ದರು. ಈಗ 4 ಲಕ್ಷ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...