ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಮತದಾನಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಚುನಾವಣಾ ಅಧಿಕಾರಿಗಳು ಬೆಂಗಳೂರಿನ ಬಾರ್ & ರೆಸ್ಟೋರೆಂಟ್ ಗಳಿಗೆ ಬಿಸಿ ಮುಟ್ಟಿಸಿದ್ದು, ನೋಟಿಸ್ ಜಾರಿ ಮಾಡಿದ್ದಾರೆ.
ಒಂದು ಸಾವಿರಕ್ಕೂ ಹೆಚ್ಚು ಬಾರ್ & ರೆಸ್ಟೋರೆಂಟ್ ಗಳಿಗೆ ನೋಟಿಸ್ ನೀಡಲಾಗಿದ್ದು, ಅವಧಿ ಮೀರಿ ಬಾರ್ ಹಾಗೂ ರೆಸ್ಟೋರೆಂಟ್ ಗಳನ್ನು ನಡೆಸುತ್ತಿದ್ದ ಹಾಗೂ ದಾಖಲೆ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಗಳಿಗೆ ಚುನಾವಣಾ ಆಯೋಗ ನಿಯಮ ಪಾಲನೆಗೆ ಸೂಚಿಸಿದೆ. ಎಂ ಆರ್ ಪಿ ಶಾಪ್ ಗಳು ಕೂಡ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಳ್ಳುವಂತಿಲ್ಲ. ಅಕ್ರಮ ಮಧ್ಯ ಮಾರಾಟ ಹಾಗೂ ಸಾಗಾಟ ಕಂಡು ಬಂದಲ್ಲಿ ಜಪ್ತಿ ಮಾಡಗುತ್ತಿದೆ. ಈ ನಿಟ್ಟಿನಲ್ಲಿ ನೋಟಿಸ್ ನೀಡಿ ಎಚ್ಚರಿಸಲಾಗಿದೆ.