ಚಿಕ್ಕಮಗಳೂರು: ಹಿತ್ಲೆಗುಳಿಯಲ್ಲಿ ಅಕ್ರಮ ಮದ್ಯ ಸೇವಿಸಿ ಪುಟ್ಟೇಗೌಡ(60) ಸಾವು ಕಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಹಿತ್ಲೆಗುಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ ನಿರ್ಲಕ್ಷ ತೋರಿದ ಆರೋಪ ಕೇಳಿ ಬಂದಿದೆ. ನಿನ್ನೆ ಸಂಜೆ ಮದ್ಯ ಸೇವನೆ ಬಳಿಕ ಗ್ರಾಮದ ಪುಟ್ಟೇಗೌಡ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಮೂರನೇ ವ್ಯಕ್ತಿ ಸಾವನ್ನಪ್ಪಿರುವುದಾಗಿ ಹೇಳಲಾಗಿದೆ. ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ, ಎಸ್ಪಿ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.