
ಬೆಂಗಳೂರು: ಹೆದ್ದಾರಿಯಲ್ಲಿ ಟಿಂಬರ್ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಮಿಳುನಾಡಿನ ದಿಂಬಂ 13ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳುದುಕೊಂಡು ಟಿಂಬರ್ ಲಾರಿ ಹೆದ್ದಾರಿಯಲ್ಲಿಯೇ ಪಲ್ಟಿಯಾಗಿ ಬಿದ್ದಿದೆ. ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ನಿಂದಾಗಿ ಸಂಚಾರ ಅಸ್ತವ್ಯಸ್ಥಗಾದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಲಾರಿ ತೆರವುಗೊಳಿಸಿ, ಸಂಚಾರಕ್ಕೆ ಅನುವುಮಾಡಿಕೊಟ್ಟರು.