
ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ.
ಟಿಪ್ಪರ್ ಲಾರಿ- ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರನ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.