
ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆಂದು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಬೈಕ್ ನಲ್ಲಿ ಕರೆದೊಯ್ಯುವಾಗ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕಗ್ಗೋಡ ಗ್ರಾಮದ ಬಳಿ ನಡೆದಿದೆ.
43 ವರ್ಷದ ವೆಂಕಿ ಚೌವ್ಹಾಣ್ ಮೃತರು. ಮಗಳು ಐಶ್ವರ್ಯಾ ಹಾಗೂ ಪಕ್ಕದ ಮನೆಯ ನಿವಾಸಿ ಶ್ವೇತಾ ಇಬ್ಬರನ್ನು ಬೈಕ್ ನಲ್ಲಿ ಪರೀಕ್ಷಾ ಕೇಂದ್ರಕ್ಕೆ ಬಿಡಲು ಕರೆದೊಯ್ಯುತ್ತಿದ್ದರು. ಈ ವೇಳೆ ತೆಲಂಗಾಣ ನೋಂದಣಿ ಹೊಂದಿರುವ ಲಾರಿ ವೇಗವಾಗಿ ಬಂದು ಬೈಕ್ ಗೆ ಡಿಕ್ಕಿಇ ಹೊಡೆದಿದೆ. ವೆಂಕಿಇ ಚೌವ್ಹಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.