
ಕೊಪ್ಪಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪರಶುರಾಮ್ (40) ಹಾಗೂ ಹನುಮಂತ (35) ಮೃತ ದುರ್ದೈವಿಗಳು. ಮೃತರಿಬ್ಬರೂ ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಅಪಘಾತದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.