
ರಾಯಚೂರು: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಕಲ್ಲೂರು ಬಳಿ ನಡೆದಿದೆ.
ಮೃತ ಮೂವರು ರಾಯಚೂರು ಜಿಲ್ಲೆಯ ಮಾನ್ವಿ ಮೂಲದವರು. ಮಾನ್ವಿಯಿಂದ ರಾಯಚೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಸಿರಾವರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.