alex Certify BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ ನಡೆದಿದೆ.

ಮೂವರು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ತಾಯಿ-ಮಗ ಹಾಗೂ ಅಣ್ಣನ ಮಗ ಎಂದು ಗುರುತಿಸಲಾಗಿದೆ.

ಮೂವರು ಮಧುಗಿರಿಯಿಂದ ಗೌರಿಬಿದನೂರು ಕಡೆಗೆ ತೆರಳುತ್ತಿದ್ದರು. ಅರಸಾಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...