ಉತ್ತರ ಪ್ರದೇಶದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು ವಿವಿಧ ಧಾರ್ಮಿಕ ಸ್ಥಳಗಳಲ್ಲಿದ್ದ 45,773 ಧ್ವನಿವರ್ಧಕಗಳನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಪ್ರಶಾಂತ್ ಕುಮಾರ್, ಶನಿವಾರ 45,773 ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದ್ದು, 58,8621 ಧ್ವನಿವರ್ಧಕಗಳ ಸೌಂಡ್ ಲೆವೆಲ್ ಅನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
BIG NEWS: ಆಸಿಡ್ ದಾಳಿ ಪ್ರಕರಣ; ಆರೋಪಿ ಪತ್ತೆಗೆ 7 ತಂಡ ರಚನೆ
ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಧಾರ್ಮಿಕ ಸಂಸ್ಥೆಗಳಲ್ಲಿ ಸ್ಥಾಪಿಸಲಾಗಿದ್ದ ಅಕ್ರಮ ಧ್ವನಿವರ್ಧಕಗಳನ್ನು ತೆರವುಗೊಳಿಸುವಂತೆ ಪೊಲೀಸರಿಗೆ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆ ಆರಂಭವಾಗಿದೆ.