ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಶಾಲೆಗಳು, ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರ ಪ್ರದೇಶದ ಮಸೀದಿಗಳಲ್ಲಿನ ಕೆಲವು ಧ್ವನಿವರ್ಧಕಗಳ ಧ್ವನಿ ಕಡಿಮೆ ಮಾಡಲಾಗಿದೆ. ಕೆಲವನ್ನು ತೆಗೆದುಹಾಕಲಾಗಿದೆ. ತೆಗೆದುಹಾಕಲಾದ ಧ್ವನಿವರ್ಧಕಗಳನ್ನು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ದಾನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತ್ತು ನಂತರ ಬಿಜೆಪಿ ಆಡಳಿತದ ಉತ್ತರ ಪ್ರದೇಶ ರಾಜ್ಯದಲ್ಲಿ ಯಾವುದೇ ಗಲಭೆಗಳು ನಡೆದಿಲ್ಲ ಎಂದು ಆರ್.ಎಸ್.ಎಸ್. ಸಂಯೋಜಿತ ವಾರಪತ್ರಿಕೆಗಳಾದ ‘ಪಾಂಚಜನ್ಯ’ ಮತ್ತು ‘ಆರ್ಗನೈಸರ್’ ಆಯೋಜಿಸಿದ್ದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಆದಿತ್ಯನಾಥ್ ಹೇಳಿದ್ದಾರೆ.
ರಸ್ತೆಗಳಲ್ಲಿ ಈದ್ ನಮಾಜ್ ಮಾಡದಿರುವುದನ್ನು ನೀವು ಮೊದಲ ಬಾರಿಗೆ ನೋಡಿರಬಹುದು. ಈಗ, ಮಸೀದಿಯ ಧ್ವನಿವರ್ಧಕದ ವಾಲ್ಯೂಮ್ ಕಡಿಮೆಯಾಗಿದೆ ಅಥವಾ ಧ್ವನಿವರ್ಧಕವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂಬುದನ್ನು ನೀವು ಕೇಳಿರಬೇಕು. ತೆಗೆದು ಹಾಕಿದ ಧ್ವನಿವರ್ಧಕಗಳನ್ನು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ದೇಣಿಗೆ ನೀಡಲಾಗಿದೆ ಎಂದರು.