alex Certify ಬೆಂಗಳೂರಲ್ಲಿ ಪೈಶಾಚಿಕ ಕೃತ್ಯ: ಪ್ರೀತಿಸಿದ ಯುವಕನಿಗೆ ಸಂಬಂಧಿಕರಿಂದಲೇ ಪೆಟ್ರೋಲ್ ಸುರಿದು ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಪೈಶಾಚಿಕ ಕೃತ್ಯ: ಪ್ರೀತಿಸಿದ ಯುವಕನಿಗೆ ಸಂಬಂಧಿಕರಿಂದಲೇ ಪೆಟ್ರೋಲ್ ಸುರಿದು ಬೆಂಕಿ

ಬೆಂಗಳೂರು: ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಪ್ರೀತಿಸಿದ ವಿಚಾರಕ್ಕೆ ಯುವಕನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಶಶಾಂಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಕರ ಯುವತಿಯನ್ನು ಶಶಾಂಕ್ ಪ್ರೀತಿಸಿದ್ದು, ಇದೇ ವಿಚಾರಕ್ಕೆ ಜಗಳವಾಗಿತ್ತು ಎನ್ನಲಾಗಿದೆ. ಪೋಷಕರ ವಿರೋಧದ ನಡುವೆ ಶಶಾಂಕ್ ಸಂಬಂಧಿಯಾಗಿರುವ ಯುವತಿ ಪ್ರೀತಿಸಿದ್ದ. ಜುಲೈ 3 ರಂದು ಮೈಸೂರಿನಿಂದ ಬೆಂಗಳೂರಿಗೆ ಬಂದಿದ್ದ ಯುವತಿಯನ್ನು ಶಶಾಂಕ್ ಮನೆಗೆ ಕರೆದುಕೊಂಡು ಹೋಗಿದ್ದ. ಯುವತಿಯ ಪೋಷಕರು ಶಶಾಂಕ್ ಮನೆಗೆ ನುಗ್ಗಿ ಹಲ್ಲೆ ಮಾಡಿ ಯುವತಿಯನ್ನು ಕರೆದುಕೊಂಡು ಹೋಗಿದ್ದರು. ಇದಾದ ಬಳಿಕ ಯುವಕ ಎಂದಿನಂತೆ ನಿನ್ನೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ಆರ್.ಆರ್. ನಗರದಿಂದ ಶಶಾಂಕ್ ನನ್ನು ಅಪಹರಿಸಿ ಬೆಂಕಿ ಹಚ್ಚಲಾಗಿದೆ. ಗಾಯಾಳು ಶಶಾಂಕ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...