alex Certify ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾಗಿದ್ದಕ್ಕೆ ಆಕ್ರೋಶ: ಅಂತರ್ಜಾತಿ ವಿವಾಹವಾದ ಯುವಕನ ಮನೆಗೆ ನುಗ್ಗಿ ಹಲ್ಲೆ

ದಾವಣಗೆರೆ: ವರ್ಷದಿಂದ ಪರಸ್ಪರ ಪ್ರೀತಿಸಿ 20 ದಿನಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರಿಂದ ಯುವಕನ ಮನೆಗೆ ನುಗ್ಗಿ ಯುವತಿ ಮನೆಯವರು ಹಲ್ಲೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸಿದ್ದಾರ್ಥ ಮತ್ತು ಸೃಷ್ಟಿ ಅವರು ಅನ್ಯ ಜಾತಿಯವರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಯುವತಿಗೆ ಆಕೆಯ ಮನೆಯವರು ಬೇರೆ ಹುಡುಗನೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು.

ಸಿದ್ಧಾರ್ಥ ಮತ್ತು ಸೃಷ್ಟಿ 20 ದಿನಗಳ ಹಿಂದೆ ದೇವಾಲಯವೊಂದರಲ್ಲಿ ಮದುವೆಯಾಗಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ನೋಂದಣಿ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವತಿ ಮನೆಯವರು ಶನಿವಾರ ಸಂಜೆ ಹುಡುಗನ ಮನೆಗೆ ನುಗ್ಗಿ ಗಲಾಟೆ ಮಾಡಿ ಕುಟುಂಬದವರ ಮೇಲೆ ಹಲ್ಲೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...