ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜುನಾಥ್(25), ಅಮೃತಾ(21) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕಾರಿಪುರ ಬಳಿ ನಿನ್ನೆ ರಾತ್ರಿ ಬೈಕ್ ಅಪಘಾತವಾಗಿ ಮಂಜುನಾಥ್ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಪತಿ ಮಂಜುನಾಥ್ ಅವರ ಸಾವಿನಿಂದ ಮನನೊಂದಿದ್ದ ಪತ್ನಿ ಅಮೃತಾ ಮನೆಗೆ ಬಂದು ನೇಣಿಗೆ ಶರಣಾಗಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಮಂಜುನಾಥ್, ಅಮೃತಾ ಸಾವಿನಲ್ಲೂ ಜೊತೆಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.