ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಆರೋಪಕ್ಕೆ ಸಂಬಂಧಿಸಿದಂತೆ ಮದುವೆಗೆ ಅಡ್ಡಿಪಡಿಸಿದ ಸ್ಥಳದಲ್ಲಿಯೇ ಯುವ ಜೋಡಿ ಹಾರ ಬದಲಾಯಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ಸಬ್ ರಿಜಿಸ್ಟ್ರಾರ್ ಕಚೇರಿ ಎದುರಲ್ಲೇ ಜಾಫರ್ ಮತ್ತು ಚೈತ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯುವ ಜೋಡಿಗೆ ಮುಸ್ಲಿಂ ಮತ್ತು ದಲಿತ ಸಂಘಟನೆಗಳು ಸಾಥ್ ನೀಡಿವೆ. ಎರಡು ದಿನದ ಹಿಂದೆ ಇವರ ಮದುವೆಗೆ ಹಿಂದೂ ಸಂಘಟನೆ ಕಾರ್ಯಕರ್ತರು ಅಡ್ಡಿ ಮಾಡಿದ್ದರು. ಲವ್ ಜಿಹಾದ್ ಆರೋಪ ಮಾಡಿ ಮದುವೆಗೆ ಅಡ್ಡಿಪಡಿಸಿದ್ದರು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಇವರ ಮದುವೆಗೆ ಪೋಷಕರ ಒಪ್ಪಿಗೆ ಇದ್ದು, ಜಾಫರ್ ಮತ್ತು ಚೈತ್ರಾ ಮದುವೆ ನೋಂದಣಿಗೆ ಅರ್ಜಿ ಸಲ್ಲಿಸಿದ್ದಾರೆ. 30 ದಿನ ನೋಟಿಸ್ ಅವಧಿ ಇರುತ್ತದೆ. ಮದುವೆಗೆ ಆಕ್ಷೇಪಣೆ ಸಲ್ಲಿಕೆಯಾದಲ್ಲಿ ವಿಚಾರಣೆ ನಡೆಸಲಾಗುವುದು. ಆಕ್ಷೇಪಣೆ ಸಲ್ಲಿಕೆ ಆಗದಿದ್ದಲ್ಲಿ ಮದುವೆ ನೋಂದಣಿಯಾಗಲಿದೆ ಎಂದು ಹೇಳಲಾಗಿದೆ.