alex Certify ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಕೆರೆ ಬಳಿ ಶವ ಎಸೆದಿದ್ದಾನೆ.

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಾಸಲುಹಳ್ಳ ಗ್ರಾಮದ ಕಾವ್ಯಾ(19) ಮೃತಪಟ್ಟವರು. ಕಾಗಳಗೆರೆ ಗ್ರಾಮದ ಸಚಿನ್ ಕೊಲೆ ಆರೋಪಿಯಾಗಿದ್ದಾನೆ. ಕೆಲವು ವರ್ಷಗಳ ಹಿಂದೆ ಇವರು ಪ್ರೀತಿಸಿ ಮದುವೆಯಾಗಿದ್ದು, ಒಂದು ಮಗು ಇದೆ. ಆರೋಪಿ ಸಚಿನ್ ಎರಡನೇ ಮದುವೆಯಾಗಿ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ ಕಾರಣ ಆಕೆ ತವರು ಮನೆ ಸೇರಿಕೊಂಡಿದ್ದು, ಜೀವನಾಂಶ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಕಿಡ್ನಿಯಲ್ಲಿ ಕಲ್ಲು ಇದೆ ಶಸ್ತ್ರ ಚಿಕಿತ್ಸೆ ಮಾಡಿಸಬೇಕಿದೆ ಎಂದು ಜನವರಿ 5ರಂದು ಪತ್ನಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದ ಸಚಿನ್ ಗುರುವಾರ ಕಾವ್ಯಾ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿ ಕೆರೆ ಬಳಿ ಮೃತ ದೇಹ ಎಸೆದಿದ್ದಾನೆ. ಕಾವ್ಯಾ ತಾಯಿ ಕಮಲಮ್ಮ ಮಾಯಕೊಂಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...