
ಬೆಳಗಾವಿ: ಪ್ರೀತಿಸಿ ಮದುವೆಯಾದ ಯುವ ಜೋಡಿಗೆ ಮನೆಯವರು ಬೆದರಿಕೆ ಹಾಕಿದ್ದು, ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದಾರೆ.
ಬೆಳಗಾವಿ ಎಪಿಎಂಸಿ ಠಾಣೆ ಮೆಟ್ಟಿಲೇರಿದ ಜೋಡಿ ರಕ್ಷಣೆಗೆ ಮನವಿ ಮಾಡಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪ್ರಕಾಶ್ ಮತ್ತು ಸ್ವಪ್ನಾ ಬೆಳಗಾವಿ ಜಿಲ್ಲೆಯ ರಾಯಭಾಗ ಮೂಲದವರು. ಅವರು ಪ್ರೀತಿಸಿ ಮದುವೆಯಾಗಿದ್ದಕ್ಕೆ ಕುಟುಂಬದವರು ಬೆದರಿಕೆ ಹಾಕಿದ್ದಾರೆ.
ಜಾತಿ ಬೇರೆ ಎನ್ನುವ ಕಾರಣಕ್ಕೆ ಯುವತಿಯ ಕುಟುಂಬದವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಜನವರಿ 18 ರಂದು ಜೋಡಿ ರಿಜಿಸ್ಟ್ರರ್ ಮದುವೆಯಾಗಿದ್ದಾರೆ. ಮದುವೆಯ ನಂತರ ಯುವತಿಯ ಪೋಷಕರು ಕೊಲೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ರಕ್ಷಣೆ ಕೊಡುವಂತೆ ಬೆಳಗಾವಿ ಎಪಿಎಂಸಿ ಠಾಣೆ ಪೊಲೀಸರಿಗೆ ಯುವ ಜೋಡಿ ಮನವಿ ಮಾಡಿದೆ.