ಬೆಂಗಳೂರು: ವಿದ್ಯಾರ್ಥಿನಿಯನ್ನು ಪ್ರೀತಿಸುವುದಾಗಿ ನಂಬಿಸಿದ ಯುವಕನೊಬ್ಬ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.
ಸಂತ್ರಸ್ತ ವಿದ್ಯಾರ್ಥಿನಿ ವಿದ್ಯಾರಣ್ಯಪುರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಚಂದನ್ ಎಂಬುವನನ್ನು ಬಂಧಿಸಿದ್ದಾರೆ. ಚಂದನ್ ಅವರ ತಾಯಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದು, ಅದೇ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಚಂದನ್ ಗೆ ಪರಿಚಯವಾಗಿದ್ದಳು. ಇಬ್ಬರ ನಡುವೆ ಗೆಳೆತನವಾಗಿ ಪ್ರೀತಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿದ ಚಂದನ್, ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದಾನೆ. ಎರಡು ಸಲ ಗರ್ಭಿಣಿಯಾದಾಗ ಬಲವಂತದಿಂದ ಗರ್ಭಪಾತ ಮಾಡಿಸಿದ್ದಾನೆ. ಇದಲ್ಲದೆ ಸುಮಾರು 6 ಲಕ್ಷ ರೂಪಾಯಿ ಹಣ ಕೂಡ ಪಡೆದುಕೊಂಡಿದ್ದು, ಈಗ ಮದುವೆಯಾಗದೆ ವಂಚಿಸಿದ್ದಾನೆ ಎಂದು ಹೇಳಲಾಗಿದೆ.