alex Certify ರಾತ್ರಿ ಹೊತ್ತಲ್ಲಿ ಜೊತೆಯಾಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ, ಪ್ರಿಯಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಹೊತ್ತಲ್ಲಿ ಜೊತೆಯಾಗಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ, ಪ್ರಿಯಕರ

ಮೈಸೂರು: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಜೊತೆಯಾಗಿದ್ದ ಮಹಿಳೆ ಮತ್ತು ಆಕೆಯ ಗೆಳೆಯನನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ.

ಪ್ರಿಯಕರ ರಾತ್ರಿ ಮಹಿಳೆಯ ಮನೆಗೆ ಬಂದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಇಬ್ಬರನ್ನು ಹಿಡಿದು ಥಳಿಸಿದ್ದಾರೆ. ಗ್ರಾಮದ ಬೀದಿಯ ವಿದ್ಯುತ್ ಕಂಬಕ್ಕೆ ಮಹಿಳೆ ಹಾಗೂ ಪ್ರಿಯಕರನನ್ನು ಕಟ್ಟಿಹಾಕಿ ನೀರು ಕೂಡ ಕೊಡದೆ ಅಮಾನವೀಯವಾಗಿ ವರ್ತಿಸಿದ್ದಾರೆ.

ಪತಿಯಿಂದ ದೂರವಾಗಿರುವ ಮಹಿಳೆ ಪ್ರತ್ಯೇಕವಾಗಿ ವಾಸವಾಗಿದ್ದಾಳೆ. ಅಕ್ರಮ ಸಂಬಂಧ ಬೆಳೆಸಿದ್ದ ಆಕೆಯ ಮನೆಗೆ ಪ್ರಿಯಕರ ಬಂದು ಹೋಗುತ್ತಿದ್ದ. ಇಬ್ಬರು ಜೊತೆಯಾಗಿದ್ದಾಗಲೇ ಗ್ರಾಮಸ್ಥರು ಹಿಡಿದು ಥಳಿಸಿದ್ದಾರೆ. ಮಾಹಿತಿ ತಿಳಿದು ಗ್ರಾಮಕ್ಕೆ ತೆರಳಿದ ಪೊಲೀಸರು ಮಹಿಳೆ ಹಾಗೂ ಪ್ರಿಯಕರನನ್ನು ರಕ್ಷಿಸಿ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...