ಚಿಕ್ಕಮಗಳೂರು: ಪ್ರೀತಿಸಿದ ಹುಡುಗಿಗೆ ಬೇರೆ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರಿಂದ ಡೆತ್ ನೋಟ್ ಬರೆದಿಟ್ಟು ಪ್ರಿಯಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ಬಣಕಲ್ ನಲ್ಲಿ ನಡೆದಿದೆ.
ಯುವಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆರು ವರ್ಷಗಳಿಂದ ಯುವಕ, ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಗೆ ಬೇರೆ ಮದುವೆಗೆ ಮನೆಯವರು ಸಿದ್ಧತೆ ನಡೆಸಿದ್ದರು. ಇದರಿಂದ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.