alex Certify ಪ್ರಿಯತಮೆಯಿಂದಲೇ ಘೋರ ಕೃತ್ಯ, ಕತ್ತು ಕೊಯ್ದು ಪ್ರಿಯಕರನ ಪತ್ನಿ ಕೊಲೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯತಮೆಯಿಂದಲೇ ಘೋರ ಕೃತ್ಯ, ಕತ್ತು ಕೊಯ್ದು ಪ್ರಿಯಕರನ ಪತ್ನಿ ಕೊಲೆ ಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ.

ಮೋನಿಕಾ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 19 ವರ್ಷದ ಗಂಗೋತ್ರಿ ಕೊಲೆ ಮಾಡಲು ಯತ್ನಿಸಿದ ಆರೋಪಿ ಎಂದು ಹೇಳಲಾಗಿದೆ. ಮೋನಿಕಾ ಪತಿ ಗಂಗರಾಜು ಮತ್ತು ಗಂಗೋತ್ರಿ ಪ್ರೀತಿಸಿದ್ದು, ಗಂಗರಾಜು ಅಕ್ಕನ ಮಗಳಾದ ಮೋನಿಕಾಳನ್ನು 10 ತಿಂಗಳ ಹಿಂದೆ ಮದುವೆಯಾಗಿದ್ದ.

ಇದರಿಂದ ಆಕ್ರೋಶಗೊಂಡ ಗಂಗೋತ್ರಿ ಮೋನಿಕಾಳ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾಳೆ. ಗಾಯಗೊಂಡ ಮೋನಿಕಾಳನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಿಬ್ಬೂರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...