ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕುಡತಿನಿ ಗ್ರಾಮದಲ್ಲಿ ಪ್ರಿಯಕರನೊಬ್ಬ ಅಕ್ರಮ ಸಂಬಂಧ ಹೊಂದಿದ ಮಹಿಳೆಯನ್ನು ಕೊಲೆ ಮಾಡಿದ್ದಾನೆ.
ಕಾಶಿಮಪ್ಪ(45) ಕೊಲೆ ಆರೋಪಿ. ಈತ 29 ವರ್ಷದ ಮಹಿಳೆಯೊಂದಿಗೆ ಆಕ್ರಮ ಸಂಬಂಧ ಬೆಳೆಸಿದ್ದ. ಆ ಮಹಿಳೆ ಮತ್ತೊಬ್ಬನೊಂದಿಗೆ ಸಲುಗೆಯಿಂದ ಇರುವುದನ್ನು ಸಹಿಸದೆ ಕೊಲೆ ಮಾಡಿದ್ದಾನೆ. ಡಿಸೆಂಬರ್ 20ರಂದು ಕುಡಿತಿನಿ ಕೈಗಾರಿಕಾ ಪ್ರದೇಶದ ನಿರ್ಜನ ಪ್ರದೇಶಕ್ಕೆ ಮಹಿಳೆಯನ್ನು ಕರೆಸಿಕೊಂಡ ಆರೋಪಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ನಂತರ ಜಗಳವಾಡಿ ಕೊಲೆ ಮಾಡಿದ್ದು, ಶವ ಹೂತುಹಾಕಿದ್ದಾನೆ.
ಮಹಿಳೆ ನಾಪತ್ತೆಯಾದ ಬಗ್ಗೆ ಅವರ ಅತ್ತೆ ಕುಡಿತಿನಿ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.