alex Certify ಸ್ನೇಹಿತರೊಂದಿಗೆ ಸೇರಿ ತಾಯಿಯ ಪ್ರಿಯಕರನನ್ನು ಹೊಡೆದು ಕೊಂದ ಪುತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತರೊಂದಿಗೆ ಸೇರಿ ತಾಯಿಯ ಪ್ರಿಯಕರನನ್ನು ಹೊಡೆದು ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಠಾಣೆ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ.

ಶಿಕಾರಿಪುರ ತಾಲೂಕಿನ ಇನಾಮ್ ಮುತ್ತಳ್ಳಿ ಗ್ರಾಮದಲ್ಲಿ ವಿವಾಹಿತ ಸೋಮಪ್ಪ(30) ಎನ್ನುವ ವ್ಯಕ್ತಿ ಮಾರ್ಚ್ 2 ರಂದು ಮೃತಪಟ್ಟಿದ್ದ. ಸೋಮಪ್ಪ ಮತ್ತು ಆತನ ಸ್ನೇಹಿತ ಹನುಮಂತಪ್ಪ ಅವರ ಮೇಲೆ ದುಷ್ಕರ್ಮಿಗಳು ಹಿಗ್ಗಾಮುಗ್ಗಾ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿ ಗ್ರಾಮದ ಬಳಿ ಬಿಟ್ಟು ಹೋಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಸೋಮಪ್ಪ ಶಿಕಾರಿಪುರ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆತನ ಸ್ನೇಹಿತ ಹನುಮಂತಪ್ಪ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮಪ್ಪನಿಗೆ ಅದೇ ಗ್ರಾಮದ 45 ವರ್ಷದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆದಿದ್ದು, ಈ ವಿಚಾರವಾಗಿ ಗಲಾಟೆ ನಡೆದು ಸಮಾಜದ ಮುಖಂಡರು ಸೋಮಪ್ಪನಿಗೆ 19,000 ರೂ. ದಂಡ ಹಾಕಿದ್ದರು. ನಂತರ ಮಹಿಳೆ ತನ್ನ ಮಕ್ಕಳೊಂದಿಗೆ ಹಿರೇಕೆರೂರು ತಾಲೂಕಿನ ಬಲ್ಡೆಕಟ್ಟಿ ಗ್ರಾಮದಲ್ಲಿ ವಾಸವಾಗಿದ್ದಳು.

ಆದರೆ ಸೋಮಪ್ಪ ಮತ್ತು ಮಹಿಳೆ ನಡುವೆ ಅಕ್ರಮ ಸಂಬಂಧ ಮುಂದುವರೆದಿತ್ತು. ಮಾರ್ಚ್ 2 ರಂದು ಸೋಮಪ್ಪನನ್ನು ಊಟಕ್ಕೆ ಬರುವಂತೆ ಮಹಿಳೆ ಕರೆದಿದ್ದಳು. ಸ್ನೇಹಿತ ಹನುಮಂತಪ್ಪನೊಂದಿಗೆ ಸೋಮಪ್ಪ ಊಟಕ್ಕೆ ಹೋಗಿದ್ದ ವೇಳೆಯಲ್ಲಿ ಮಹಿಳೆಯ ಮಗ ಸುದೀಪ್, ಆತನ ಸ್ನೇಹಿತರಾದ ನಾಗರಾಜ ಮತ್ತು ರಮೇಶ ಸಮೀಪದ ಕಾಡಿಗೆ ಸೋಮಪ್ಪ ಮತ್ತು ಹನುಮಂತಪ್ಪನನ್ನು ಕರೆದುಕೊಂಡು ಹೋಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಇನಾಮ್ ಮುತ್ತಳ್ಳಿ ಗ್ರಾಮದ ಬಳಿ ಬಿಟ್ಟು ಹೋಗಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲವೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಕೊನೆಗೆ ಪೊಲೀಸರ ಮಧ್ಯಪ್ರವೇಶದಿಂದ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಶಿರಾಳಕೊಪ್ಪ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...