ಬೆಂಗಳೂರು: ಆನೇಕಲ್ ತಾಲೂಕಿನ ಸಮಂದೂರು ಸಮೀಪ ರೈಲಿಗೆ ಸಿಲುಕಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರನಾಯಕನಹಳ್ಳಿಯ ಮಣಿ ಮತ್ತು ಕೊತಗೊಂಡಪಲ್ಲಿ ಅನುಷಾ ಮೃತಪಟ್ಟವರು ಎಂದು ಹೇಳಲಾಗಿದೆ. ಕೆಲ ವರ್ಷಗಳಿಂದ ಇವರು ಪ್ರೀತಿಸುತ್ತಿದ್ದರು. ಈ ವಿಚಾರ ಮನೆಯವರಿಗೆ ಗೊತ್ತಾಗಿ ಬುದ್ಧಿವಾದ ಹೇಳಿದ್ದಾರೆ. ಇತ್ತೀಚೆಗೆ ಯುವತಿಯ ಮದುವೆಗೆ ಪೋಷಕರು ತೀರ್ಮಾನಿಸಿದ್ದರಿಂದ ದುಡುಕಿನ ನಿರ್ಧಾರ ಕೈಗೊಂಡು ರೈಲಿಗೆ ಸಿಲುಕಿ ಜೀವ ಕಳೆದುಕೊಂಡಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.