
ಬೀದರ್: ಪೋಷಕರು ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ ಲಾಡಗೇರಿಯಲ್ಲಿ ನಡೆದಿದೆ.
ಶರತ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶರತ್ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರತ್ ಸಾವಿನ ಸುದ್ದಿ ತಿಳಿದ ಸಂಗೀತಾ(22) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇಬ್ಬರೂ ಪ್ರೀತಿಸಿದ್ದು, ಪೋಷಕರು ಮದುವೆಗೆ ನಿರಾಕರಿಸಿದ್ದರು. ಇದರಿಂದ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.