
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪ ನಿರ್ಜನ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರು ದರ್ಶನ್ ಮತ್ತು ಹಾಸನ ಜಿಲ್ಲೆ ಹಾನಬಾಳುವಿನ ಪೂರ್ವಿಕಾ ಮೃತಪಟ್ಟವರು ಎಂದು ಹೇಳಲಾಗಿದೆ. ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿಯ ನಿರ್ಜನ ಪ್ರದೇಶದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರೇಮಿಗಳ ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಇಬ್ಬರ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಲ್ದೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.