
ಧಾರವಾಡ: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಲಾರಿ(23) ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹೆಬ್ಬಳ್ಳಿ ಹೊರವಲಯದ ಪಾಳುಬಿದ್ದ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರೀತಿಗೆ ಪೋಷಕರ ವಿರೋಧ ಹಿನ್ನಲೆಯಲ್ಲಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.