ಮೈಸೂರು: ಮೈಸೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯ ಹೋಟೆಲ್ ನಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಲೋಕೇಶ್ ಹಾಗೂ ಎಂಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮದುವೆಯಾಗಿ ವಯಸ್ಸಿಗೆ ಬಂದ ಮಗಳಿದ್ದರು ಲೋಕೇಶ್ ಎಂಎಸ್ಸಿ ವಿದ್ಯಾರ್ಥಿನಿಯನ್ನು ಪ್ರೀತಿಸಿದ್ದರು.
ಬುಧವಾರ ಬೆಳಿಗ್ಗೆ ಹೋಟೆಲ್ ನಲ್ಲಿ ರೂಂ ಪಡೆದು ತಂಗಿದ್ದ ಲೋಕೇಶ್ ಮತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ರೂಮ್ ಸೇರಿಕೊಂಡ ಇವರು ಸಂಜೆಯವರೆಗೂ ಹೊರಬಂದಿರಲಿಲ್ಲ. ಈ ಬಗ್ಗೆ ಹೋಟೆಲ್ ಸಿಬ್ಬಂದಿ ಮ್ಯಾನೇಜರ್ ಗೆ ತಿಳಿಸಿದ್ದಾರೆ.
ಈ ನಡುವೆ ಲೋಕೇಶ್ ಸ್ನೇಹಿತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಯುವತಿಯನ್ನು ಸಾಯಿಸಿದ್ದೇನೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದ ಸ್ನೇಹಿತರು ಅವರ ಲೋಕೇಶನ್ ಆಧರಿಸಿ ಹುಡುಕಿಕೊಂಡು ಬಂದಾಗ ಇಬ್ಬರು ಮೃತಪಟ್ಟಿರುವುದು ಗೊತ್ತಾಗಿದೆ.
ಕೊಠಡಿಯಲ್ಲಿ ಹಗ್ಗಗಳು ಕಂಡುಬಂದಿದ್ದು, ಸಾಯಲು ಮೊದಲೇ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನುವುದು ಅನುಮಾನ ಮೂಡಿಸಿದೆ. ಇಬ್ಬರ ಸಾವಿನ ಪ್ರಕರಣ ನಿಗೂಢವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.