ಬೆಂಗಳೂರು: ಹೊರಮಾವು ಸೇತುವೆ ಸಮೀಪ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕನ್ನಮಂಗಲ ನಿವಾಸಿ ಚೇತನಾ(19) ಮತ್ತು ಸಿರೀಶ್(20) ಮೃತಪಟ್ಟವರು ಎಂದು ಹೇಳಲಾಗಿದೆ. ಶುಕ್ರವಾರ ರಾತ್ರಿ 7.30 ರ ಸುಮಾರಿಗೆ ಕಾಕಿನಾಡ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಪ್ರೇಮ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ರೈಲ್ವೆ ಹಳಿಗಳ ಸಮೀಪ ಮೃತದೇಹಗಳನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.