ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲವಾಗಿದೆ. ಇದರ ಪರಿಣಾಮ ರಾಜ್ಯಾದ್ಯಂತ ಇಂದಿನಿಂದ ಒಂದು ವಾರ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಸ್ಥಳ ಮತ್ತು ಕರಾವಳಿ ಭಾಗದಲ್ಲಿ ಶನಿವಾರ ಮಳೆಯಾಗಿದೆ.
ಉಡುಪಿ ಜಿಲ್ಲೆ ಸಿದ್ದಾಪುರ, ತುಮಕೂರು ಜಿಲ್ಲೆ ಹೊಸಕೋಟೆ ಸೇರಿ ಹಲವೆಡೆ ತುಂತುರು ಮಳೆಯಾಗಿದೆ. ಶನಿವಾರ ವಿಜಯಪುರದಲ್ಲಿ ಕನಿಷ್ಠ ತಾಪಮಾನ 15.5 ಡಿಗ್ರಿ ಸೆಲ್ಸಿಯಸ್, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.
ಉಳಿದಂತೆ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ದುರ್ಬಲವಾಗಿರುವುದರಿಂದ ಒಂದು ವಾರ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.