
ಈ ಘಟನೆ ಉತ್ತರ ಪ್ರದೇಶದ ಹಾಪುರದಲ್ಲಿ ನಡೆದಿದ್ದು, ತನ್ನ ಪತಿಯ ವರ್ತನೆ ಬಗ್ಗೆ ಅನುಮಾನ ಹೊಂದಿದ್ದ ಪತ್ನಿ, ಆತ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಹೊರಟಾಗ ಆತನಿಗೆ ಗೊತ್ತಾಗದಂತೆ ಹಿಂಬಾಲಿಸಿದ್ದಾಳೆ. ಅಲ್ಲದೆ ಪೊಲೀಸರಿಗೂ ಕೂಡ ಈ ಕುರಿತಂತೆ ಮೊದಲೇ ಮಾಹಿತಿ ನೀಡಿದ್ದಳು ಎನ್ನಲಾಗಿದೆ.
ಕೆಲಸದ ನೆಪದಲ್ಲಿ ಮನೆಯಿಂದ ಹೊರ ಬಿದ್ದಿದ್ದ ಪತಿ ನೇರವಾಗಿ ತನ್ನ ಗರ್ಲ್ ಫ್ರೆಂಡ್ ಭೇಟಿಗೆ ಹೋಗಿದ್ದಾನೆ. ಆತನನ್ನು ಹಿಂಬಾಲಿಸಿದ್ದ ಪತ್ನಿ ರೆಡ್ ಹ್ಯಾಂಡ್ ಆಗಿ ಇಬ್ಬರನ್ನು ಹಿಡಿದಿದ್ದು, ವಂಚಿಸಿದ್ದ ಪತಿಗೆ ತಪರಾಕಿ ನೀಡಿದ್ದಾಳೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಆತನನ್ನು ಪಾರು ಮಾಡಿ ಠಾಣೆಗೆ ಕರೆದೊಯ್ದಿದ್ದಾರೆ.
ಅಲ್ಲಿ ಪತಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಕಳೆದ ಮೂರು ವರ್ಷಗಳಿಂದ ನಾನು ಸಂಬಂಧದಲ್ಲಿ ಇದ್ದೇನೆ ಎಂದು ತಿಳಿಸಿದ್ದಾನೆ. ಇದೀಗ ಪೊಲೀಸರು ಪತಿ-ಪತ್ನಿ ನಡುವೆ ರಾಜಿ ಪಂಚಾಯಿತಿ ನಡೆಸಿದ್ದಾರೆ ಎನ್ನಲಾಗಿದ್ದು, ಆದರೆ ವಿಡಿಯೋ ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.