alex Certify LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

LPG ಸಿಲಿಂಡರ್ ಸ್ಪೋಟ: ಛಿದ್ರಛಿದ್ರವಾದ ಛಾವಣಿ ಶೀಟ್ ಗಳು, ಮೂವರಿಗೆ ಗಾಯ

ಬೆಂಗಳೂರು: ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸ್ಪೋಟಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಸ್ಪೋಟದ ತೀವ್ರತೆಗೆ ಮನೆಯ ಛಾವಣಿಯ ಶೀಟ್ ಗಳು ಛಿದ್ರಛಿದ್ರವಾಗಿವೆ. ಮೇಲ್ಚಾವಣಿಗೆ ಸಿಮೆಂಟ್ ಶೀಟ್ ಗಳನ್ನು ಅಳವಡಿಸಲಾಗಿತ್ತು. ಸಿಲಿಂಡರ್ ಸ್ಪೋಟದಿಂದ ಶೀಟ್ ಗಳು ಛಿದ್ರಗೊಂಡಿದ್ದು, ಘಟನೆಯಲ್ಲಿ ಮನೆಯಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...