ದಾವಣಗೆರೆ: ಅಡುಗೆ ಅನಿಲ ಸಂಪರ್ಕ ಹೊಂದಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯ ದಾಖಲೆಯೊಂದಿಗೆ ತಮ್ಮ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ದೃಢೀಕರಣ ನೀಡಬೇಕು. ಆದರೆ ಇದಕ್ಕೆ ಯಾವುದೇ ಕಾಲಮಿತಿ ಇಲ್ಲ ಮತ್ತು ಇ-ಕೆವೈಸಿಗೆ ಹಣ ನೀಡುವಂತಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ. .
ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆದಿರುವವರು ಹಾಗೂ ಉಳಿದ ಗ್ಯಾಸ್ ಸಂಪರ್ಕ ಹೊಂದಿರುವ ಗ್ರಾಹಕರು ಡಿ. 31 ರೊಳಗಾಗಿ ತಮ್ಮ ಏಜೆನ್ಸಿಗೆ ತೆರಳಿ ಉಚಿತವಾಗಿ ಇ-ಕೆವೈಸಿ ದೃಢೀಕರಣ ನೀಡಬೇಕು. ಆಗ ಮಾತ್ರ ಸಬ್ಸಿಡಿ ಹಣ ದೊರೆಯುತ್ತದೆ ಮತ್ತು ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಯಾಗಿದ್ದರಿಂದ ಅವರು ಸ್ಪಷ್ಟನೆ ನೀಡಿದ್ದಾರೆ.