alex Certify ತಮಿಳುನಾಡಿನಲ್ಲಿ ನಟಿ ರಾಧಿಕಾಗೆ ಬಿಜೆಪಿ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮಿಳುನಾಡಿನಲ್ಲಿ ನಟಿ ರಾಧಿಕಾಗೆ ಬಿಜೆಪಿ ಟಿಕೆಟ್

ಚೆನ್ನೈ: ತಮಿಳುನಾಡಿನ 15 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿರುಧುನಗರದಿಂದ ಟಿಕೆಟ್ ನೀಡಲಾಗಿದೆ.

ಇತ್ತೀಚಿಗೆ ನಟ ಶರತ್ ಕುಮಾರ್ ಅವರು ಆಲ್ ಇಂಡಿಯಾ ಸಮಥುವ ಮಕ್ಕಳ್ ಕಚ್ಚಿ ಪಕ್ಷ(AISMK)ವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು. ಗುರುವಾರ ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ಬಿಜೆಪಿ ಶುಕ್ರವಾರ ಮತ್ತೆ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಒಟ್ಟು 24 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಉಳಿದ 15 ಕ್ಷೇತ್ರಗಳಿಗೆ ಮೈತ್ರಿ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧಿಸಲಿದ್ದಾರೆ.

ನಟಿ ರಾಧಿಕಾ ಶರತ್ ಕುಮಾರ್ ಅವರಿಗೆ ವಿರುದುನಗರದಿಂದ ಟಿಕೆಟ್ ಘೋಷಣೆಯಾಗಿದೆ. ರಾಧಿಕಾ ಕನ್ನಡ, ತಮಿಳು ಸೇರಿದಂತೆ ಹಲವು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ವಿರುದುನಗರ ಕ್ಷೇತ್ರದಲ್ಲಿ ರಾಧಿಕಾ ಶರತ್ ಕುಮಾರ್ ಅವರಿಗೆ ನಟ ವಿಜಯಕಾಂತ್ ಅವರ ಮಗ ಷಣ್ಮುಗ ಪಾಂಡ್ಯನ್ ಪ್ರತಿಸ್ಪರ್ಧಿಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...