alex Certify BIG BREAKING: ಬಿಪಿನ್ ರಾವತ್ ಬಳಿಕ ಸಿಡಿಎಸ್ ಸ್ಥಾನಕ್ಕೆ ಅನಿಲ್ ಚವ್ಹಾಣ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಪಿನ್ ರಾವತ್ ಬಳಿಕ ಸಿಡಿಎಸ್ ಸ್ಥಾನಕ್ಕೆ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ಕೇಂದ್ರ ಸರ್ಕಾರ ಹೊಸ ಸಿಡಿಎಸ್ ನೇಮಿಸಿದೆ. ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಚವಾನ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ.

ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಮೃತಪಟ್ಟಿದ್ದರು. ಬಿಪಿನ್ ರಾವತ್ ಆಕಾಲಿಕ ನಿಧನದಿಂದ ತೆರವಾಗಿದ್ದ ಹುದ್ದೆಗೆ 2021 ರ ಮೇ 31 ರಂದು ಸೇನೆಯಿಂದ ನಿವೃತ್ತರಾಗಿದ್ದ ಚವ್ಹಾಣ್ ಅವರನ್ನು ನೇಮಕ ಮಾಡಲಾಗಿದೆ.

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ(ಸಿಡಿಎಸ್) ಸರ್ಕಾರ ನೇಮಿಸಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮತ್ತು ಮುಂದಿನ ಆದೇಶದವರೆಗೆ ಮಿಲಿಟರಿ ವ್ಯವಹಾರಗಳ ಇಲಾಖೆ ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಾರೆ.

ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಈಶಾನ್ಯದಲ್ಲಿ ಕಾರ್ಯಾಚರಣೆಗಳಲ್ಲಿ ವ್ಯಾಪಕ ಅನುಭವ ಹೊಂದಿದ್ದಾರೆ.

ಮೇ 18, 1961 ರಂದು ಜನಿಸಿದ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರು 1981 ರಲ್ಲಿ ಭಾರತೀಯ ಸೇನೆಯ  ಗೂರ್ಖಾ ರೈಫಲ್ಸ್‌, ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ಖಡಕ್ವಾಸ್ಲಾ ಮತ್ತು ಇಂಡಿಯನ್ ಮಿಲಿಟರಿ ಅಕಾಡೆಮಿ ಡೆಹ್ರಾಡೂನ್‌, ಮೇಜರ್ ಜನರಲ್ ಶ್ರೇಣಿಯಲ್ಲಿ ಉತ್ತರ ಕಮಾಂಡ್‌ನಲ್ಲಿ ಬಾರಾಮುಲಾ ಸೆಕ್ಟರ್‌ ನಲ್ಲಿ ಪದಾತಿದಳದ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದಾರೆ.

ಈಶಾನ್ಯದಲ್ಲಿ ಕಾರ್ಪ್ಸ್‌ ಕಮಾಂಡ್ ಆಗಿದ್ದರು. ಸೆಪ್ಟೆಂಬರ್ 2019 ರಿಂದ ಪೂರ್ವ ಕಮಾಂಡ್‌ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಮೇ 31, 2021 ರಂದು ಸೇವೆಯಿಂದ ನಿವೃತ್ತರಾಗುವವರೆಗೆ ಅಧಿಕಾರ ಹೊಂದಿದ್ದರು.

ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕನ ಉಸ್ತುವಾರಿ ಸೇರಿದಂತೆ ಪ್ರಮುಖ ಹುದ್ದೆಗಳು ಮತ್ತು ಅಂಗೋಲಾದಲ್ಲಿ ವಿಶ್ವಸಂಸ್ಥೆಯ ಮಿಷನ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

31 ಮೇ 2021 ರಂದು ಅಧಿಕಾರಿ ಭಾರತೀಯ ಸೇನೆಯಿಂದ ನಿವೃತ್ತರಾದರು. ಸೇನೆಯಿಂದ ನಿವೃತ್ತರಾದ ನಂತರವೂ ಅವರು ರಾಷ್ಟ್ರೀಯ ಭದ್ರತೆ ಮತ್ತು ಕಾರ್ಯತಂತ್ರದ ವಿಷಯಗಳಿಗೆ ಕೊಡುಗೆ ನೀಡುವುದನ್ನು ಮುಂದುವರೆಸಿದರು. ಸೇನೆಯಲ್ಲಿನ ವಿಶಿಷ್ಟ ಮತ್ತು ಶ್ರೇಷ್ಠ ಸೇವೆಗಾಗಿ, ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್(ನಿವೃತ್ತ) ಅವರಿಗೆ ಪರಮ ವಿಶಿಷ್ಟ ಸೇವಾ ಪದಕ, ಉತ್ತಮ ಯುದ್ಧ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಮತ್ತು ವಿಶಿಷ್ಟ ಸೇವಾ ಪದಕಗಳನ್ನು ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...