ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಬಾಂಬ್ ಸ್ಫೋಟಿಸುವುದಾಗಿ ವಾಟ್ಸಾಪ್ ನಲ್ಲಿ ಮೆಸೇಜ್ ಕಳಿಸಲಾಗಿದೆ.
ಪೊಲೀಸ್ ಕಂಟ್ರೋಲ್ ರೂಮ್ ಯುಪಿ 112 ರ ವಾಟ್ಸಾಪ್ ಸಂಖ್ಯೆಗೆ ಈ ಬೆದರಿಕೆ ಕರೆ ಬಂದಿದೆ. ಬೆದರಿಕೆ ಬಂದಿರುವ ನಂಬರ್ ಶಾಹಿದ್ ಖಾನ್ ಹೆಸರಿನಲ್ಲಿ ದಾಖಲಾಗಿದೆ. ಬೆದರಿಕೆಯ ನಂತರ, ಪೊಲೀಸರು ತರಾತುರಿಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 2 ರಂದು ಜೀವ ಬೆದರಿಕೆ ಹಾಕಲಾಗಿತ್ತು. ಭದ್ರತಾ ಏಜೆನ್ಸಿಗಳು ಈ ಬಗ್ಗೆ ಅಲರ್ಟ್ ಮೋಡ್ ನಲ್ಲಿವೆ. ಇದೀಗ ಪೊಲೀಸ್, ಸೈಬರ್ ಮತ್ತು ಕಣ್ಗಾವಲು ಕೋಶದ ತಂಡ ಈ ಪ್ರಕರಣದಲ್ಲಿ ತನಿಖೆ ಆರಂಭಿಸಿದೆ.
ಮೊಬೈಲ್ ನಂಬರ್ ಆಧರಿಸಿ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿಗಳ ಬಂಧನಕ್ಕೆ ಹಲವು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಸುಶಾಂತ್ ಗಾಲ್ಫ್ ಸಿಟಿ ಪ್ರಭಾರಿ ಇನ್ಸ್ಪೆಕ್ಟರ್ ಶೈಲೇಂದ್ರ ಗಿರಿ ತಿಳಿಸಿದರು.
ಆಪರೇಷನ್ ಕಮಾಂಡರ್ ವಾಟ್ಸಾಪ್ ನಲ್ಲಿ ಬೆದರಿಕೆ ಸಂದೇಶದ ಸ್ಕ್ರೀನ್ ಶಾಟ್ ಸಹ ಒದಗಿಸಿದ್ದಾರೆ. ಇದರ ಸಹಾಯದಿಂದ ಕಣ್ಗಾವಲು ಮತ್ತು ಸೈಬರ್ ಸೆಲ್ ಸೇರಿದಂತೆ ಪೊಲೀಸರ ಹಲವು ತಂಡಗಳು ಸಂಖ್ಯೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿವೆ. ಆತನ ಸ್ಥಳ ಇತ್ಯಾದಿ ಪತ್ತೆಗೆ ಪ್ರಯತ್ನ ನಡೆಸಲಾಗುತ್ತಿದೆ. ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ ನಂತ ಭದ್ರತೆ ಬಿಗಿಗೊಳಿಸಲಾಗಿದೆ.