
ಲಕ್ನೋದ ಬಾರಾಬಂಕಿಯ, ಕಿಸಾನ್ ಪಥದ ಹೊರ ವರ್ತುಲ ರಸ್ತೆಯಲ್ಲಿ ಭಾರೀ ದುರ್ಘಟನೆ ಸಂಭವಿಸಿದೆ. ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ.32 ಜನರಿಗೆ ಗಂಭೀರ ಗಾಯವಾಗಿದೆ. ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರು ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರ ಕೊತ್ವಾಲಿಯ ಮಾತಿ ಪೊಲೀಸ್ ಠಾಣೆಯ ಬಾಬುರಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಹಸುವನ್ನು ರಕ್ಷಿಸಲು ಹೋದ ಬಸ್ ಚಾಲಕ, ಲಾರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.
ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಸ್ಸಿನ ಸಂಪೂರ್ಣ ಭಾಗ ಜಖಂಗೊಂಡಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ದೆಹಲಿಯಿಂದ ಬಹ್ರೈಚ್ ಗೆ ಹೋಗುತ್ತಿತ್ತು. ಬಸ್ಸಿನಲ್ಲಿ 60 ರಿಂದ 70 ಪ್ರಯಾಣಿಕರಿದ್ದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಡಾ. ಆದರ್ಶ್ ಸಿಂಗ್ ಅವರು ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
