alex Certify ಕ್ಯಾಬ್​ ಚಾಲಕನ ಮೇಲೆ ಯುವತಿಯಿಂದ ಹಲ್ಲೆ: ವಿಡಿಯೋ ವೈರಲ್​…..!​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾಬ್​ ಚಾಲಕನ ಮೇಲೆ ಯುವತಿಯಿಂದ ಹಲ್ಲೆ: ವಿಡಿಯೋ ವೈರಲ್​…..!​

 

ಮೂರು ದಿನಗಳ ಹಿಂದೆ ಉತ್ತರ ಪ್ರದೇಶ ರಾಜಧಾನಿ ಲಕ್ನೋದಲ್ಲಿ ವೇಗವಾಗಿ ಕಾರು ಚಲಾಯಿಸಿದ ಹಿನ್ನೆಲೆ ಸಾರ್ವಜನಿಕವಾಗಿ ಚಾಲಕನನ್ನು ಥಳಿಸಿದ್ದ ಯುವತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್​ ಆಗಿದ್ದು ನೆಟ್ಟಿಗರು ಯುವತಿಯನ್ನು ಬಂಧಿಸುವಂತೆ ಆಗ್ರಹಿಸುತ್ತಿದ್ದಾರೆ.

ಕೃಷ್ಣ ನಗರ ಠಾಣೆಯಲ್ಲಿ ಯುವತಿಯ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಯುವತಿಯ ವಿರುದ್ಧ ಐಪಿಸಿ ಸೆಕ್ಷನ್​ 394 ಹಾಗೂ 427 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಯಾಬ್​ ಚಾಲಕ ನ್ಯಾಯಕ್ಕಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಬಳಿಕ ಈ ಪ್ರಕರಣವು ಬೆಳಕಿಗೆ ಬಂದಿದೆ. ದೂರಿನಲ್ಲಿ ಕ್ಯಾಬ್ ಚಾಲಕ ಯುವತಿಯು ತನಗೆ ಥಳಿಸಿದ್ದು ಮಾತ್ರವಲ್ಲದೆ ಫೋನ್​ನ್ನು ಕಸಿದು ಅದನ್ನು ಪುಡಿ ಮಾಡಿದ್ದಾಳೆ ಎಂದೂ ಉಲ್ಲೇಖಿಸಿದ್ದಾರೆ.

ಶುಕ್ರವಾರ ಯುವತಿ ಹಾಗೂ ಕ್ಯಾಬ್​ ಚಾಲಕನನ್ನು ಪೊಲೀಸ್​ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿತ್ತು. ಇನ್ನು ಪ್ರಕರಣ ಸಂಬಂಧ ಯುವತಿ ನೀಡಿರುವ ವಿವರಣೆಯೇ ಬೇರಾಗಿದೆ. ವೇಗವಾಗಿ ಕಾರು ಚಲಾಯಿಸಿಕೊಂಡು ಬರ್ತಿದ್ದ ಕ್ಯಾಬ್​ ಚಾಲಕ ನಾನು ರಸ್ತೆ ದಾಟುವ ವೇಳೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾನೆ. ಈತನ ವೇಗದ ಚಾಲನೆಯಿಂದ ನನಗೆ ಚಿಕ್ಕಪುಟ್ಟ ಗಾಯವಾಗಿದೆ ಎಂದು ಹೇಳಿದ್ದಾಳೆ.

— Megh Updates ? (@MeghUpdates) July 31, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...